ISRO ನೇಮಕಾತಿ 2026: 244 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..!
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ತನ್ನ ಕೇಂದ್ರೀಕೃತ ನೇಮಕಾತಿ ಮಂಡಳಿ (ICRB) ಮೂಲಕ 2026ನೇ ಸಾಲಿನ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಒಟ್ಟು 244 ಸಹಾಯಕ (Assistant), ಕಿರಿಯ ವೈಯಕ್ತಿಕ ಸಹಾಯಕ (JPA), ಪ್ರಥಮ ದರ್ಜೆ ಗುಮಾಸ್ತ (UDC) ಹಾಗೂ ಶೀಘ್ರಲಿಪಿಗಾರ (Stenographer) ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಯಾವುದೇ ಪದವಿಯಲ್ಲಿ ಕನಿಷ್ಠ ಶೇ. 60 ಅಂಕ ಗಳಿಸಿರುವ ಅಭ್ಯರ್ಥಿಗಳಿಗೆ ಇಸ್ರೋದಲ್ಲಿ ಗೌರವಾನ್ವಿತ ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಳ್ಳಲು ಇದೊಂದು ಅತ್ಯುತ್ತಮ ಅವಕಾಶವಾಗಿದೆ. … Read more