CM ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ಹೊಸ ನಡೆ..!
ಕರ್ನಾಟಕ ಕಾಂಗ್ರೆಸ್ ಕೋಟೆಯಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲ ಮೂಡಿಸಿದ್ದ ಅಧಿಕಾರ ಹಂಚಿಕೆಯ ಹಗ್ಗಜಗ್ಗಾಟಕ್ಕೆ ಕೊನೆಗೂ ಕ್ಲೈಮ್ಯಾಕ್ಸ್ ಸಿಕ್ಕಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಅಧಿಕೃತವಾಗಿ ರಾಜೀನಾಮೆ ನೀಡಿದ್ದು, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ‘ಕನಕಪುರ ಬಂಡೆ’ ಡಿ.ಕೆ. ಶಿವಕುಮಾರ್ ಅವರ ಪಟ್ಟಾಭಿಷೇಕ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ. ಬುಧವಾರ ನಡೆದ ಸಚಿವರ ಉಪಾಹಾರ ಕೂಟದಲ್ಲೇ ಸಿದ್ದರಾಮಯ್ಯ ಅವರು, ‘ಮುಂದಿನ ಸಿಎಂ ಡಿ.ಕೆ. ಶಿವಕುಮಾರ್ ಅವರೇ’ ಎಂದು ತಮ್ಮ ಸಹೋದ್ಯೋಗಿಗಳಿಗೆ ಸ್ಪಷ್ಟಪಡಿಸಿದ್ದರು ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ … Read more